ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 504, 153ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಎಂದು ಟೀಕಿಸಿದ್ದರು. ಸಿಎಂ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿನ್ನೆ ಹುಣಸೂರಿನಲ್ಲಿ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಗ್ಗೆ ಪ್ರತಾಪ್ ಸಿಂಹ ಟೀಕೆ ಮಾಡಿದ್ದರು. ಈ ಸಂಬಂಧ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಜಯಕುಮಾರ್ ನೀಡಿದ ದೂರಿನ ಅನ್ವಯ ಕೇಸು ದಾಖಲಿಸಲಾಗಿದೆ. ನಿನ್ನೆ ಹೇಳಿಕೆ ಖಂಡಿಸಿ ಮೈಸೂರಿನ ಪ್ರತಾಪ ಸಿಂಹ ಅವರ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.