
ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲಿನ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 44 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿದಂತೆ 44 ಮಂದಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಆದರೂ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಹೈಡ್ರಾಮಾ ನಡೆದಿತ್ತು. ಹಲಸೂರು ಗೇಟ್ ಪೊಲೀಸ್ ಠಾಣೆಯ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.