alex Certify ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಕಂಗನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ನಟಿ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಚಿತ್ರರಂಗದ ಕುರಿತು ಮಾತ್ರವಲ್ಲದೆ ರಾಜಕೀಯ ಹೇಳಿಕೆಗಳನ್ನೂ ಸಹ ನೀಡುವ ಮೂಲಕ ಕಂಗನಾ ರಣಾವತ್ ಕೆಲವರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಈಗ ಈ ನಟಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಖಾಸಗಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದ ವೇಳೆ ಕಂಗನಾ ರಣಾವತ್, 1947 ರಲ್ಲಿ ನಮಗೆ ಸಿಕ್ಕಿದ್ದು ಭಿಕ್ಷೆ. ಆದರೆ 2014ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ. ಕಂಗನಾ ಅವರ ಈ ಹೇಳಿಕೆ ಲಕ್ಷಾಂತರ ಸ್ವಾತಂತ್ರ ಹೋರಾಟಗಾರರಿಗೆ ಮಾಡಿದ ಅಪಮಾನ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

ಇದರ ಮಧ್ಯೆ ಬಿಜೆಪಿ ಸಂಸದ ವರುಣ್ ಗಾಂಧಿ ಸಹ ಕಂಗನಾ ರಣಾವತ್ ಅವರ ಹೇಳಿಕೆಗೆ ಕಿಡಿ ಕಾರಿದ್ದು, ಹಿಂದೆ ಮಹಾತ್ಮಗಾಂಧಿಯವರ ತ್ಯಾಗವನ್ನು ಅವಮಾನಿಸಿ ಅವರ ಹಂತಕನನ್ನು ನೀವು ಗೌರವಿಸಿದ್ದಿರಿ. ಈಗ ಇಂತಹ ಹೇಳಿಕೆ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಕಡೆಗಣಿಸಿದ್ದೀರಿ. ನಿಮ್ಮ ಹೇಳಿಕೆ ದೇಶದ್ರೋಹವಲ್ಲದೆ ಮತ್ತೇನು ಎಂದು ವರುಣ್ ಗಾಂಧಿ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...