ಕಲಬುರಗಿ : ಬಜೆಟ್ ಪಾಸ್ ಆದ್ರು ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಅವರ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರಿಗೆ ಬಜೆಟ್ ಪಾಸ್ ಆದರೂ ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ. ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದು ಹೇಳಿದ್ದಾರೆ.