
ಇಂದೋರ್: ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮಕ್ಕೆ ಪಾರವೇ ಇಲ್ಲವಾಗಿದೆ. ಈ ಸಡಗರವನ್ನು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಬಿಜೆಪಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಮಧ್ಯಪ್ರದೇಶದ ಇಂದೋರ್ ನಲ್ಲಿರುವ ನಾಲ್ಕು ಅಂತಸ್ತಿನ ಬಿಜೆಪಿ ಕಚೇರಿಯ ಮೇಲ್ಛಾವಣಿಗೆ ಬೆಂಕಿ ಹೊತ್ತಿಕೊಂಡಿದೆ. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಪಟಾಕಿಯ ಕಿಡಿ ಕಚೇರಿಯ ಮೇಲ್ಛಾವಣಿ ಮೇಲೆ ಬಿದ್ದು, ಈ ಅವಘಡ ಸಂಭವಿಸಿದೆ.
ಕಟ್ಟಡದಲ್ಲಿದ್ದ ಪೀಠೋಪಕರಣಗಳು, ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.