ಬೆಂಗಳೂರು: ಜೆಡಿಎಸ್ ಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಬೇರೂರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಹಳೆಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗೆ ಒತ್ತು ನೀಡಲು ಮತ್ತು ಒಕ್ಕಲಿಗ, ಕುರುಬ ಮತದಾರರ ಕ್ರೋಢೀಕರಣದ ಬಗ್ಗೆ ಚರ್ಚೆ ನಡೆದಿದೆ.
ಮತಗಳು ಮತ್ತು ನಾಯಕರನ್ನು ಹೇಗೆ ಜೋಡಿಸಬೇಕೆಂದು ಪ್ಲಾನ್ ಮಾಡಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಹಂತದ ನಾಯಕರಿಗೆ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿದ ಅಮಿತ್ ಶಾ, ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಸೂಚನೆ ನೀಡಿದ್ದಾರೆ. ಚುನಾವಣೆಗೆ ರೋಡ್ ಮ್ಯಾಪ್ ಸಿದ್ದಗೊಳಿಸಿ 150 ಸ್ಥಾನಗಳನ್ನು ಗೆದ್ದು ಸ್ವಂತ ಬಲದಲ್ಲಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮುಖಂಡರಿಗೆ ನಿರ್ದೇಶನ ನೀಡಿದ್ದಾರೆ.