alex Certify ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಕಾಂಗ್ರೆಸ್ ಶಾಸಕರಾರೂ ಬಲಿಯಾಗಲ್ಲ: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಕಾಂಗ್ರೆಸ್ ಶಾಸಕರಾರೂ ಬಲಿಯಾಗಲ್ಲ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಯತ್ನ ನಡೆಸಿದೆ. ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಮುಂದಾಗಿದೆ. ಆದರೆ ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಆಪರೇಶನ್ ಕಮಲ ನಡೆಸಲು ಯತ್ನಿಸಿದ್ದಾರೆ. ಶಾಸಕ ಗಣಿಗ ರವಿ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿ-ಜೆಡಿಎಸ್ ಎರಡೂ ಪಕ್ಷದವರು ಸೇರಿ ಈಗ ಮತ್ತೆ ಇಂತಹ ಪ್ರಯತ್ನಕ್ಕೆ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ಮುಡಾ ಹಗರಣ ಆರೋಪದಲ್ಲಿ ರಾಜೀನಾಮೆಗೆ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ವಿಜಯೇಂದ್ರ ಹೇಲಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...