
ಗಾಂಧಿನಗರ: ಗುಜರಾತ್ ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದಿದ್ದ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಮಾಡುವ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದಿದ್ದ ಸಭೆ ಮುಕ್ತಾಯದ ನಂತರ ಬಿಜೆಪಿ ನಾಯಕರು ಮತ್ತೆ ಮಹತ್ವದ ಸಭೆ ನಡೆಸಿದ್ದರು. ಸಭೆಯಲ್ಲಿ ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.