ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಆರೋಗ್ಯವಾಗಿರುವ ಅವರು ಕೊರೋನಾ ನಿಯಮಾನುಸಾರ ಹೋಮ್ ಐಸೋಲೇಷನ್ ನಲ್ಲಿ ಇದ್ದಾರೆ. ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ನಡ್ಡಾ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
ಆರಂಭಿಕ ರೋಗ ಲಕ್ಷಣಗಳ ನಂತರ ಟೆಸ್ಟ್ ನಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.