ಪ್ರಮುಖ ಬೆಳವಣಿಗೆಯೊಂದರಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ರಾಜ್ಯ ಘಟಕದ ಅಧ್ಯಕ್ಷರಾಗಿ ಸುನಿಲ್ ಜಾಖರ್ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶ ಹೊರಡಿಸಿದ್ದಾರೆ.