ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ಈ ವಿಚಾರಗಳಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಬಿಜೆಪಿ ಆರೋಪಿಸಿ ಜಿಲ್ಲಾ ಕೇಂದ್ರಗಳಲ್ಲಿ ಇಂದು ಪ್ರತಿಭಟನೆ ನಡೆಸಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾತನಾಡಿ, ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ಬಿಜೆಪಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲಿದ್ದಾರೆ. ಸಂತ್ರಸ್ತೆಯನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿಲ್ಲ. ಈ ವಿಚಾರದಲ್ಲಿ ಹೈಕೋರ್ಟ್ ಕೂಡ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಸರ್ಕಾರ ಇಂತಹ ಘಟನೆ ನಡೆದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ ಎಂದು ಹೇಳಿದ್ದಾರೆ.