BIG NEWS: ‘ವಕ್ಪ್’ ವಿರುದ್ಧ ಇಂದು ಬಿಜೆಪಿಯಿಂದ 2ನೇ ಹಂತದ ಹೋರಾಟ

ವಿಜಯಪುರ: ಇಂದು ವಕ್ಫ್ ವಿರುದ್ಧ ಬಿಜೆಪಿಯಿಂದ ಎರಡನೇ ಹಂತದ ಹೋರಾಟ ನಡೆಯಲಿದೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಬಿಜೆಪಿ ವತಿಯಿಂದ ಹೋರಾಟ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ಸರ್ಕಾರ ಎಂದು ಆರೋಪಿಸಿ ನಮ್ಮ ಭೂಮಿ ನಮ್ಮ ಹಕ್ಕು ಘೋಷವಾಕ್ಯದಡಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಈ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಧರಣಿ ನಡೆಸಲಾಗಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ರಮೇಶ ಜಿಗಜಿಣಗಿ ಸೇರಿ ಹಲವು ಬಿಜೆಪಿ ನಾಯಕರು ಧರಣಿಯಲ್ಲಿ ಭಾಗವಹಿಸಿದ್ದರು.

ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್, ಸಂಸದ ತೇಜಸ್ವಿ ಸೂರ್ಯ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ್ದರು. ನಂತರದಲ್ಲಿ ಯತ್ನಾಳ್ ಧರಣಿ ಸ್ಥಗಿತಗೊಳಿಸಿದ್ದರು. ಇಂದು ಜಿಲ್ಲಾ ಬಿಜೆಪಿಯಿಂದ ಎರಡನೇ ಹಂತದ ಹೋರಾಟ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read