
ಬೆಂಗಳೂರು: ರಾಜ್ಯ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮತ್ತು ರಾಜ್ಯಪಾಲರನ್ನು ಕಾಂಗ್ರೆಸ್ ಅವಮಾನ ಮಾಡಿರುವುದನ್ನು ಖಂಡಿಸಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದೆ. ಕೆಲವೆಡೆ ಭಾವಚಿತ್ರಗಳನ್ನು ದಹಿಸಲಾಗಿದೆ. ಸಚಿವರಾದ ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿ ಅನೇಕರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.