ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ವಿರುದ್ಧ ನಿನ್ನೆ ಮೆಜೆಸ್ಟಿಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಜೊತೆ ಆರ್. ಅಶೋಕ್ ವಾಗ್ವಾದ ನಡೆಸಿದ ವಿಡಿಯೋ ಎಡಿಟ್ ಮಾಡಿ ಹರಿ ಬಿಟ್ಟಿರುವ ಆರೋಪ ಕೇಳಿ ಬಂದಿದೆ.
ಕೆಪಿಸಿಸಿ ಎಕ್ಸ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ವಿಡಿಯೋ ಹಂಚಿಕೆ ಮಾಡಲಾಗಿದೆ ಎಂದು ಆರ್. ಅಶೋಕ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂವಹನ ಅಧ್ಯಕ್ಷ ರಮೇಶ್ ಬಾಬು, ಸಹ ಅಧ್ಯಕ್ಷೆ ಐಶ್ವರ್ಯಾ ಮಹದೇವ್, ಉಪಾಧ್ಯಕ್ಷ ಸತ್ಯಪ್ರಕಾಶ್, ಕೆಪಿಸಿಸಿ ಸಾಮಾಜಿಕ ಮಾಧ್ಯಮ ಸಹ ಅಧ್ಯಕ್ಷ ವಿಜಯ ಮತ್ತಿಕಟ್ಟೆ, ನಿಕೇತ್ ರಾಜ್ ಮೌರ್ಯ ಅವರ ವಿರುದ್ಧ ಆರ್. ಅಶೋಕ ದೂರು ನೀಡಿದ್ದಾರೆ.
ವಿಡಿಯೋ ಎಡಿಟ್ ಮಾಡಿ ಹರಿಬಿಟ್ಟಿರುವುದರ ಬಗ್ಗೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.