alex Certify ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಳಿ ಶಾಸಕರ ಪಟ್ಟಿ ಇದ್ದು, ಶಾಸಕರ ಸೇರ್ಪಡೆಗೆ ತಾಂತ್ರಿಕ ತೊಂದರೆ ಇರುವುದರಿಂದ ತಾಂತ್ರಿಕ ಸಮಸ್ಯೆಯನ್ನು ನಿವಾರಿಸಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಮುಖ್ಯಮಂತ್ರಿಗಳು ತಾಂತ್ರಿಕ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ 150 ಸ್ಥಾನ ಟಾರ್ಗೆಟ್ ಕೊಟ್ಟಿದೆ. ಅಮಿತ್ ಶಾ ಮತ್ತು ಬಿ.ಎಲ್. ಸಂತೋಷ್ ಅವರು ಚರ್ಚೆ ನಡೆಸಿದ್ದು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಭಾಗದ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಷರತ್ತು ಹಾಕದೆ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನೂ ಹಲವು ನಾಯಕರನ್ನು ಗುರುತಿಸಿದ್ದೇವೆ. ಅವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...