ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹತ್ತುಕ್ಕೂ ಹೆಚ್ಚು ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಜಾಂಬೋಟಿ ರಸ್ತೆಯಲ್ಲಿರುವ ರೆಸಾರ್ಟ್ ನಲ್ಲಿ ಬಿಜೆಪಿ ರೆಬಲ್ ನಾಯಕರು ಸಭೆ ನಡೆಸಿದ್ದು, ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಎನ್.ಆರ್.ಸಂತೋಷ್ ಕೂಡ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಈಗಾಗಲೇ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ ಸಿಡಿದೆದ್ದಿದ್ದಾರೆ. ಈ ಇಬ್ಬರು ನಾಯಕರಿಗೆ ಇನ್ನೂ ಹಲವು ಬಿಜೆಪಿ ನಾಯಕರು ಬೆಂಬಲ ನೀಡಿದ್ದಾರೆ. ರೆಬಲ್ ನಾಯಕರ ರಹಸ್ಯ ಸಭೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾರಪ್ಪ ಸೇರಿದಂತೆ ಹತ್ತಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರು ಪಾದಯಾತ್ರೆ ಮುಗಿಸುತ್ತಿದ್ದಂತೆ ರೆಬಲ್ ನಾಯಕರು ಆಕ್ಟೀವ್ ಆಗಿದ್ದು, ಬೆಳಿಗ್ಗೆಯಿಂದ ನಡೆಯುತ್ತಿರುವ ಬಿಜೆಪಿ ರೆಬಲ್ ನಾಯಕರ ಗೌಪ್ಯ ಸಭೆ ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿದೆ.