ಜಮ್ಮು-ಕಾಶ್ಮೀರ ಚುನಾವಣೆಗೆ 10 ಅಭ್ಯರ್ಥಿಗಳ 6ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಕಥುವಾ(ಎಸ್‌ಸಿ) ಕ್ಷೇತ್ರದಿಂದ ಭರತ್ ಭೂಷಣ್ ಅವರನ್ನು ಕಣಕ್ಕಿಳಿಸಿದೆ. ಆರ್.ಎಸ್. ಪಠಾನಿಯಾ ಉಧಂಪುರ ಪೂರ್ವದಿಂದ ಮತ್ತು ನಾಸೀರ್ ಅಹ್ಮದ್ ಲೋನ್ ಬಂಡಿಪೋರಾದಿಂದ ಸ್ಪರ್ಧಿಸಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಬಿಜೆಪಿ ಪ್ರಣಾಳಿಕೆ
ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕಾರಕ್ಕೇರಿದರೆ ಮೆಟ್ರೋ ಸಂಪರ್ಕ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಿದೆ. ಪ್ರತಿ ಕುಟುಂಬದ ಹಿರಿಯ ಮಹಿಳೆಗೆ ಪ್ರತಿ ವರ್ಷ 18,000 ರೂಪಾಯಿ ನೀಡಲು ಬಿಜೆಪಿ ‘ಮಾ ಸಮ್ಮಾನ್ ಯೋಜನೆ’ಯನ್ನು ತರಲಿದೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25, ಮತ್ತು ಅಕ್ಟೋಬರ್ 1 ರಂದು ಅಸೆಂಬ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಹೊರಬೀಳಲಿದೆ. ಕಳೆದ 2014 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು.