ಚಂಡೀಗಢ: ಪಂಜಾಬ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳಿಗೆ ಹಿನ್ನಡೆಯಾಗಿದೆ. ಆಪ್ ಸಿಎಂ ಅಭ್ಯರ್ಥಿ ಮಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪಾಟಿಯಾಲದಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಹಿನ್ನಡೆಯಾಗಿದೆ.
ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಹಿನ್ನಡೆ ಗಳಿಸಿದ್ದಾರೆ. ಚನ್ನಿ ಪಾಟಿಯಾಲ ಹಾಗೂ ಚಮ್ ಕೌರ್ ಸಾಹಿಬ್ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ ಮಾನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.
ಪಂಜಾಬ್ ಅಕಾಲಿದಳ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
117 ಸದಸ್ಯ ಬಲದ ಪಂಜಾಬ್ ನಲ್ಲಿ ಆಪ್ 48, ಕಾಂಗ್ರೆಸ್ 39, SAD 19, BJP 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.