ಉತ್ತರಾಖಂಡ್ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ತಲಾ 34 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 36 ಬೇಕಿದೆ.
ಉತ್ತರಪ್ರದೇಶದ 403 ಕ್ಷೇತ್ರಗಳಲ್ಲಿ ಬಿಜೆಪಿ 214, ಸಮಾಜವಾದಿಪಕ್ಷ 102, BSP 9, ಕಾಂಗ್ರೆಸ್ 4, ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಗೋವಾದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ 21, ಬಿಜೆಪಿ 15, ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪಂಜಾಬ್ 117 ಕ್ಷೇತ್ರಗಳಲ್ಲಿ ಕಾಂಗ್ರೆಸ್ 22, AAP 72, SAD 8, ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.
ಮಣಿಪುರದ 60 ಸ್ಥಾನಗಳಲ್ಲಿ ಬಿಜೆಪಿ 26, ಕಾಂಗ್ರೆಸ್ 18, NPP 8 ಹಾಗೂ ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.