ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಮತ ಎಣಿಕೆ ಕೇಂದ್ರಗಳ ಹೊರಗೆ, ಪಕ್ಷದ ಕಚೇರಿ ಸೇರಿದಂತೆ ಹಲವೆಡೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು, ಬೆಂಬಲಿಗರ ಸಂಭ್ರಮ ಮುಗಿಲುಮುಟ್ಟಿದೆ.
ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವ ಕ್ಷೇತ್ರದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಲಿ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಬದೌರ್ ಹಾಗೂ ಚಮ್ ಕೌರ್ ಸಾಹಿಬ್ ಕ್ಷೇತ್ರದಲ್ಲಿ ಹಿನ್ನಡೆ ಗಳಿಸಿದ್ದಾರೆ.
ಪಂಜಾಬ್ ನಲ್ಲಿ ಒಟ್ಟು 117 ಕ್ಷೇತ್ರಗಳಲ್ಲಿ ಆಪ್ 72 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 20, SAD 28, ಬಿಜೆಪಿ 4 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.