ಉತ್ತರಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಗಳಿಸಿದೆ. 255 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಸಮಾಜವಾದಿಪಕ್ಷ 107 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಬಿಎಸ್ಪಿ 5, ಕಾಂಗ್ರೆಸ್ 4 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. 403 ಸದಸ್ಯಬಲದ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೇರಲು 202 ಸ್ಥಾನಗಳು ಬೇಕಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ.