ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ. ಧನಂಜ ಸರ್ಜಿ, ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಪುತ್ರ ಕೆ.ಎಸ್. ಪ್ರಶಾಂತ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ಮಕ್ಕಳ ತಜ್ಞರಾದ ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು, ರಾಜಕೀಯವಾಗಿ ನೆಲೆ ಕಂಡುಕೊಳ್ಳಲು ಮುಂದಾಗಿದ್ದರು. ಅವರು ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ ಪಕ್ಷ ಇಲ್ಲವೇ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಅಂತಿಮವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಪುತ್ರರಾದ ಯುವ ಮುಖಂಡ ಕೆ.ಎಸ್. ಪ್ರಶಾಂತ್ ಸಾಗರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಸಾಮಾಜಿಕ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಅವರು ಕೂಡ ಬಿಜೆಪಿ ಸೇರಿದ್ದು,, ಪಕ್ಷ ವಹಿಸುವ ಜವಾಬ್ದಾರಿ ನಿರ್ವಹಿಸುವುದಾಗಿ ಹೇಳಿದ್ದಾರೆ.