ಶಿವಮೊಗ್ಗ: ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗುವ ನಿರೀಕ್ಷೆ ಇದೆ. ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. ಒಬಿಸಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ ನನ್ನನ್ನು ಪರಿಗಣಿಸುವಂತೆ ಕೋರಿದ್ದೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದು ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ. ಒಪಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ ಎಂದರು.
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗಬಹುದೆಂಬ ನಿರೀಕ್ಷೆ ಇದೆ. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ. ಶೀಘ್ರವಾಗಿ ಪಕ್ಷದ ಹೈಕಮಾಂಡ್ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳಲಿದೆ. ರೇಣುಕಾಚಾರ್ಯ ಟೀಂ ಸಭೆ ನಡೆಸುತ್ತಿರುವುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.