alex Certify BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಕೊನೆಗೂ ವರಿಷ್ಠರು ನಿರ್ಧರಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸಿ.ಟಿ. ರವಿ, ವಿ. ಸೋಮಣ್ಣ, ಅಶ್ವತ್ಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಬಿ.ವೈ. ವಿಜಯೇಂದ್ರ, ಸುನಿಲ್ ಕುಮಾರ್ ಅವರು ರೇಸ್ ನಲ್ಲಿದ್ದು, ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು.

ವರಿಷ್ಠರು ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಚಿಂತನೆ ನಡೆಸಿದ್ದಾರೆ. ಇಂದು ಇಲ್ಲವೇ ನಾಳೆಯೊಳಗೆ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...