ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಭಾನುವಾರ ಪಕ್ಷದಿಂದ ಅಮಾನತುಗೊಳಿಸಿದೆ.
ಪಕ್ಷವು ತನ್ನ ದೆಹಲಿ ಮಾಧ್ಯಮದ ಮುಖ್ಯಸ್ಥರಾಗಿರುವ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಹೊರಹಾಕಿದೆ, ಸಾಮಾಜಿಕ ಮಾಧ್ಯಮದಲ್ಲಿನ ಅವರ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತದೆ. ಮೂಲಭೂತ ನಂಬಿಕೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದು, ನಿಮ್ಮ ಪ್ರಾಥಮಿಕ ಸದಸ್ಯತ್ವವನ್ನು ತಕ್ಷಣವೇ ಕೊನೆಗೊಳಿಸಲಾಗಿದೆ. ನಿಮ್ಮನ್ನು ಪಕ್ಷದಿಂದ ಹೊರಹಾಕಲಾಗಿದೆ ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಿಳಿಸಿದ್ದಾರೆ.
ಮುಂದಿನ ವಿಚಾರಣೆ ಬಾಕಿ ಇರಿಸಿ ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿ, ಕಾರ್ಯಯೋಜನೆಗಳು ಯಾವುದಾದರೂ ಇದ್ದರೆ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಜಿಂದಾಲ್ ಅವರು ಆಕ್ಷೇಪಾರ್ಹ ಟ್ವೀಟ್ ಗಳನ್ನು ಪೋಸ್ಟ್ ಮಾಡಿದ್ದರು, ನಂತರ ಅಳಿಸಿ ಹಾಕಿದರು. ನೂಪುರ್ ಆಗಾಗ ಪ್ರಚೋದನಾಕಾರಿ ಕಾಮೆಂಟ್ ಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆಯ ಕಾಮೆಂಟ್ ಗಳಿಂದ ದೂರವಿರುವ ಪಕ್ಷವು ಇಂದು ಮುಂಜಾನೆ ಹೇಳಿಕೆಯನ್ನು ನೀಡಿದ ನಂತರ ಈ ನಿರ್ಧಾರ ತೆಗೆದುಕೊಂಡಿದೆ.