
ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ, ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆಗೆ ಬಿಜೆಪಿಯಿಂದ ಎರಡು ತಂಡ ರಚನೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದ್ದು, ನಾಳೆ ಜೈನಮುನಿ ಹತ್ಯೆಯಾದ ಸ್ಥಳಕ್ಕೆ ನಳಿನ್ ಕುಮಾರ್ ಕಟೀಲು ಭೇಟಿ ನೀಡಲಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿರುವ ವೇಣುಗೋಪಾಲ್ ನಿವಾಸಕ್ಕೆ ಸಿ.ಟಿ. ರವಿ ಭೇಟಿ ನೀಡಲಿದ್ದಾರೆ.