
ಶಿವಮೊಗ್ಗ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಾವೇರಿ -ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ನನಗೆ ಸಿಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಇ. ಕಾಂತೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕೈತಪ್ಪಬಹುದು ಎನ್ನುವ ಆತಂಕ ಕಾರ್ಯಕರ್ತರಲ್ಲಿ ಇದೆ. ಈ ಬಗ್ಗೆ ಯಾವುದೇ ಆತಂಕ ಬೇಡ, ಟಿಕೆಟ್ ನನಗೆ ಸಿಗಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ನಾನು ಮತ್ತು ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದಾಗ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ನನ್ನ ಪರವಾಗಿ ಪ್ರಚಾರಕ್ಕೂ ಬರುವುದಾಗಿ ತಿಳಿಸಿದ್ದಾರೆ. ಹೀಗಾಗಿ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.