
ಕೊಪ್ಪಳ: ಬಿಜೆಪಿಯಲ್ಲಿ ಹಾಲಿ 8 ಸಂಸದರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಘಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ಸಂಗಣ್ಣ ಕರಡಿ ಬದಲಾಗಿ ಡಾ.ಕೆ.ಬಸವರಾಜ್ ಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಸಂಗಣ್ಣ ಕರಡಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರು ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಬಿಜೆಪಿ ಕಚೇರಿಗೆ ನುಗ್ಗಿದ ಸಂಗಣ್ಣ ಕರಡಿ ಬೆಂಬಲಿಗರು, ನ್ಯಾಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಕೆಲ ಬೆಂಬಲಿಗರು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಕಚೇರಿಯ ಗಾಜು ಪುಡಿಪುಡಿಯಾಗಿದ್ದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.