ನವದೆಹಲಿ: 5 ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬರಲಿದೆ.
ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ 158, ಬಿಜೆಪಿ 115, ಎಡಪಕ್ಷಗಳು 19 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ತಿಳಿಸಿದೆ. ಕಳೆದ ಬಾರಿ ಕೇವಲ 3 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ ಮೂರಂಕಿ ದಾಟಲಿದೆ ಎಂದು ಸಮೀಕ್ಷೆ ಹೇಳಿದೆ. ಟಿಎಂಸಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲಿ ಬಿಜೆಪಿ -ಎಐಎಡಿಎಂಕೆ ಮೈತ್ರಿ ಕೂಟಕ್ಕೆ ಅಧಿಕಾರ ಸಿಗಬಹುದೆಂದು ಹೇಳಲಾಗಿತ್ತು. ಆದರೆ, ಈ ಬಾರಿ ಡಿಎಂಕೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಕೇರಳದಲ್ಲಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ LDF ಸರ್ಕಾರವೇ ಮುಂದುವರೆಯಲಿದೆ ಎಂದು ಹೇಳಲಾಗಿದೆ.