ನವದೆಹಲಿ : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಬುಧವಾರ ಬಿಜೆಪಿ ರಾಷ್ಟ್ರೀಯ ವರಿಷ್ಠರು ಹಲವು ಸಭೆಗಳನ್ನು ನಡೆಸಿದ್ದು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಅಭ್ಯರ್ಥಿಗಳನ ಪಟ್ಟಿ ಸಿದ್ಧಪಡಿಸಿದ್ದು, ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಬಾರಿಯ ಲೋಕಸಭೆ ಚುನಾವಣೆಗೆ ಐವರು ಹಾಲಿ ಸಂಸದರಿಗೆ ಕೊಕ್ ಸಾಧ್ಯತೆ ಇದ್ದು, ಇಬ್ಬರು ಹಾಲಿ ಸಿಎಂಗಳಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ಅವರ ಹೆಸರುಗಳೂ ಕೇಳಿಬಂದಿದ್ದು, ಅಂತಿಮ ಚರ್ಚೆ ಬಳಿಕ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.