ಬೆಂಗಳೂರು: ಸಿಎಂ ಸಲಹೆಗಾರರಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಿರುವಾಗ ಜನಸಾಮಾನ್ಯರ ಪಾಡೇನು? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ಅತ್ಯಾಪ್ತರು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರ ಮಾತನ್ನೇ ಸರ್ಕಾರಿ ಅಧಿಕಾರಿಗಳು ಕೇಳುತ್ತಿಲ್ಲವಂತೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವ ಹಾದಿಯಲ್ಲಿ ಕರ್ನಾಟಕವನ್ನು ಮುನ್ನಡೆಸುತ್ತಿದೆ ಎಂಬುದಕ್ಕೆ ಇದೇ ಸುಸ್ಪಷ್ಟ ನಿದರ್ಶನ ಎಂದು ಕಿಡಿಕಾರಿದೆ.
ಜನಪ್ರತಿನಿಧಿಗಳ ಮಾತುಗಳಿಗೆ ಬೆಲೆಯಿಲ್ಲವೆಂದ ಮೇಲೆ ಇನ್ನು ಜನಸಾಮಾನ್ಯರ ಪಾಡೇನು..? ಎಂದು ಸರ್ಕಾರವನ್ನು ಪ್ರಶ್ನಿಸಿದೆ.