
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಪುನಾರಚನೆ ಮಾಡಲಾಗಿದ್ದು, ಲಖಿಂಪುರ್ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಹೇಳಿಕೆ ನೀಡಿದ ಮತ್ತು ಸರ್ಕಾರದ ನಿಲುವನ್ನು ಟೀಕಿಸಿದ್ದ ಬಿಜೆಪಿ ಸಂಸದ ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.
ಕೇಂದ್ರದ ಮಾಜಿ ಸಚಿವೆ ಮತ್ತು ಸುಲ್ತಾನಪುರ ಕ್ಷೇತ್ರದ ಸಂಸದೆ ಮೇನಕಾ ಗಾಂಧಿ ಅವರನ್ನು ಕೂಡ ಬಿಜೆಪಿ ಕಾರ್ಯಕಾರಣಿಯಿಂದ ಹೊರಗಿಡಲಾಗಿದೆ. ಕೇಂದ್ರದ ಮಾಜಿ ಸಚಿವ ಬೀರೇಂದ್ರ ಸಿಂಗ್ ಮತ್ತು ಸರ್ಕಾರವನ್ನು ಪದೇಪದೇ ಟೀಕಿಸುವ ಮೂಲಕ ಬಿಜೆಪಿಗೆ ಬಿಸಿತುಪ್ಪವಾಗಿರುವ ಡಾ. ಸುಬ್ರಮಣಿಯನ್ ಸ್ವಾಮಿ ಅವರನ್ನು ಕೂಡ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿಯಿಂದ ಕೈಬಿಡಲಾಗಿದೆ.