ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ(96) ಮತ್ತೆ ಅಸ್ವಸ್ಥರಾಗಿದ್ದು, ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ.
ಕಳೆದ ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿಯವರ ಆರೋಗ್ಯ ಹದಗೆಟ್ಟಿದ್ದು, ಈ ಸಂದರ್ಭದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಅದಕ್ಕಿಂತ ಮೊದಲು ಏಮ್ಸ್ ನಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಮಂಗಳವಾರ ಮತ್ತೆ ತೀವ್ರ ಬಳಲಿಕೆ ಹಿನ್ನೆಲೆಯಲ್ಲಿ ಅವರನ್ನು ಇಂದ್ರಪ್ರಸ್ಥ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ನಿಗಾ ವಹಿಸಿದ್ದಾರೆ.