ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರದ ಹಿನ್ನೆಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ದುಷ್ಕರ್ಮಿಗಳಿಂದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೋಣಾಜೆ ಪೊಲಿಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೋಳಿಯಾರ್ ಬಳಿ ಜೂನ್ 9ರಂದು ಬಿಜೆಪಿ ವಿಜಯೋತ್ಸವ ಮೆರವಣಿಗೆ ಆಯೋಜಿಸಿತ್ತು. ಮೆರವಣಿಗೆ ಮುಗಿಸಿ ವಾಪಾಸ್ ಆಗುತ್ತಿದ್ದವರ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಚೂರಿ ಇರಿದಿತ್ತು. ಪ್ರಕರಣ ಸಂಬಂಧ ಕೋಣಾಜೆ ಪೊಲೀಸರು ಐವರು ಆರೊಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಾಕಿರ್, ಅಬ್ದುಲ್ ರಜಾಕ್, ಅಬೂಬಕ್ಕರ್ ಸಿದ್ದಿಕ್, ಸವಾದ್ ಹಾಗೂ ಹಫೀಜ್ ಎಂದು ಗುರುತಿಸಲಾಗಿದೆ.
ಇನ್ನು ಚೂರಿ ಇರಿತದಲ್ಲಿ ಕೃಷ್ಣಕುಮಾರ್, ಹರೀಶ್ ಹಾಗೂ ನಂದಕುಮಾರ್ ಎಂಬ ಮೂವರು ಗಾಯಗೊಂಡಿದ್ದರು. ಗಾಯಾಳುಗಳಲ್ಲಿ ಹರೀಶ್ ಹಾಗೂ ನಂದಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.