alex Certify BIG NEWS: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: ಅಮಿತ್ ಶಾ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: ಅಮಿತ್ ಶಾ ಘೋಷಣೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಜೆಡಿ(ಎಸ್) ಜೊತೆಗಿನ ಮೈತ್ರಿಯ ಮಾತುಕತೆ ಕೇವಲ ವದಂತಿಯಾಗಿದೆ ಎಂದು ಅವರು ಹೇಳಿದ್ದಾರೆ. ಜೆಡಿ(ಎಸ್) ಜೊತೆ ಸಂಬಂಧ ಹೊಂದಿರುವವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ವದಂತಿಗಳನ್ನು ಹರಡುತ್ತಿದ್ದಾರೆ. ಬಿಜೆಪಿ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂದು ನಾನು ರಾಜ್ಯದ ಜನತೆಗೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಕಾಂಗ್ರೆಸ್‌ಗೆ ಅಧಿಕಾರ ಪಡೆಯುವುದು ಭ್ರಷ್ಟಾಚಾರದ ಒಂದು ಮಾರ್ಗವಾಗಿದೆ. ಆದರೆ, ನಮಗೆ ಅದು ಜನರ ಜೀವನವನ್ನು ಹಸನುಗೊಳಿಸುವುದಾಗಿದೆ. ಇತ್ತೀಚಿನ 7 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 5 ರಾಜ್ಯಗಳಲ್ಲಿ ಗೆದ್ದಿದ್ದು, 6 ರಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...