alex Certify ‘ಫ್ಲೈಯಿಂಗ್ ಕಿಸ್’ ವಿವಾದ; ರಾಹುಲ್ ಗಾಂಧಿ ವಿರುದ್ಧ ಸ್ಪೀಕರ್ ಗೆ ದೂರು ಕೊಟ್ಟ ಸ್ಮೃತಿ ಇರಾನಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಫ್ಲೈಯಿಂಗ್ ಕಿಸ್’ ವಿವಾದ; ರಾಹುಲ್ ಗಾಂಧಿ ವಿರುದ್ಧ ಸ್ಪೀಕರ್ ಗೆ ದೂರು ಕೊಟ್ಟ ಸ್ಮೃತಿ ಇರಾನಿ…!

ಸದನದಲ್ಲಿ ರಾಹುಲ್ ಫ್ಲೈಯಿಂಗ್ ಕಿಸ್ ಸನ್ನೆ ಮಾಡಿದ ವಿಷಯದ ಬಗ್ಗೆ ಲೋಕಸಭೆಯ ಸ್ಪೀಕರ್ ಮತ್ತು ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಸಂಸತ್ತಿನಲ್ಲಿ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಲೋಕಸಭೆಯ ಸ್ಪೀಕರ್ ಮತ್ತು ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಶೋಭಾ ಕರಂದ್ಲಾಜೆ ಸೇರಿ 21 ಬಿಜೆಪಿ ಸಂಸದರು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಹುಲ್ ಫ್ಲೈಯಿಂಗ್ ಕಿಸ್ ನೀಡಿದ್ದಕ್ಕೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಸ್ಮೃತಿ ಇರಾನಿ, ತಾನು ಹಾಗೂ ಇತರ ಮಹಿಳಾ ಸಂಸದರೊಂದಿಗೆ ಕುಳಿತಿದ್ದ ಕಡೆಗೆ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ಸನ್ನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ರೀತಿ ಮಾಡೋದನ್ನು ನಾನು ಆಕ್ಷೇಪಿಸುತ್ತೇನೆ. ನನಗಿಂತ ಮೊದಲು ಮಾತನಾಡಲು ಅವಕಾಶ ನೀಡಿದವರು ಹೊರಡುವ ಮೊದಲು ಅಸಭ್ಯತೆಯನ್ನು ಪ್ರದರ್ಶಿಸಿದರು. ಮಹಿಳಾ ಸದಸ್ಯರು ಇರುವ ಕಡೆಗೆ ಫ್ಲೈಯಿಂಗ್ ಕಿಸ್ ಸನ್ನೆ ಮಾಡಿದ್ರು. ಸಂಸತ್ತಿನ, ಇಂತಹ ಅಮಾನವೀಯ ನಡವಳಿಕೆಯನ್ನು ದೇಶದ ಸಂಸತ್ತಿನಲ್ಲಿ ಹಿಂದೆಂದೂ ನೋಡಿರಲಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ರು.

ಇನ್ನು ಈ ಕುರಿತು ಮಾತನಾಡಿದ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಎಲ್ಲಾ ಮಹಿಳಾ ಸದಸ್ಯರಿಗೆ ಫ್ಲೈಯಿಂಗ್ ಕಿಸ್ ಕೊಟ್ಟು ರಾಹುಲ್ ಗಾಂಧಿ ಹೊರಟು ಹೋದರು. ಇದು ಸಂಸತ್ ಸದಸ್ಯರೊಬ್ಬರ ಅಸಭ್ಯ ಹಾಗೂ ಅನುಚಿತ ವರ್ತನೆ. ಭಾರತದ ಸಂಸತ್ತಿನ ಇತಿಹಾಸದಲ್ಲಿಯೇ ಈ ರೀತಿ ಆಗಿಲ್ಲ ಎಂದು ಹಿರಿಯ ಸದಸ್ಯರು ಹೇಳುತ್ತಿದ್ದಾರೆ. ಏನು ಈ ವರ್ತನೆ? ಇವೆರೆಂಥಾ ನಾಯಕ? ಇದರ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡು ಕ್ರಮ ಕೈಗೊಳ್ಳುವಂತೆ ಸ್ಪೀಕರ್‌ಗೆ ದೂರು ನೀಡಿದ್ದೇವೆ ಎಂದು ಹೇಳಿದ್ರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಎನ್‌ಡಿಎ ಮಹಿಳಾ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಸದನದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಮೃತಿ ಇರಾನಿ, ರಾಹುಲ್ ಗಾಂಧಿಯವರು ಇಂದು ಮಾಡಿದಂತಹ ಪುರುಷರ ಸ್ತ್ರೀದ್ವೇಷದ ನಡವಳಿಕೆಯು ಸಂಸತ್ತಿನಲ್ಲಿ ಹಿಂದೆಂದೂ ನೋಡಿರಲಿಲ್ಲ. ಮಹಿಳೆಯರ ಘನತೆಯನ್ನು ಕಾಪಾಡಲು ಕಾನೂನುಗಳನ್ನು ರಚಿಸಲಾಗಿದೆ. ಆದರೆ, ಅಧಿವೇಶನದ ಸಮಯದಲ್ಲಿ ಪುರುಷನ ಸ್ತ್ರೀದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದ್ರು.

ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದು ತುಂಬಾ ನೋವಿನ ಸಂಗತಿ ಎಂದು ಹೇಳಿದ್ದಾರೆ.

— ANI (@ANI) August 9, 2023

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...