
ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಮಗ ಜಸ್ವೀರ್ ಸಿಂಗ್ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಐವರ ವಿರುದ್ಧ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಚನ್ನರಾಜ ಹಟ್ಟಿಹೊಳಿ, ಸುಜಿತ್ ಜಾಧವ್, ಇಬ್ಬರು ಗನ್ ಮ್ಯಾನ್ ಗಳು, ಸದ್ದಾಂ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.