ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿನಲ್ಲಿ ಪ್ರವಾಸ ಕೈಗೊಂಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಹಾಕಿದ್ದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸಿದ್ಧರಾಮಯ್ಯ ಭೇಟಿ ವೇಳೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆಯಲಾಗಿತ್ತು.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಠಾಣೆ ಪೋಲೀಸರು ಆರು ಜನ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.