
ಕಾರವಾರ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎರಡು ಬಣಗಳ ನಡುವೆ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ನೇತೃತ್ವದಲ್ಲಿ ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆದಿತ್ತು. ಈ ವೇಳೆ ಮಾಜಿ ಜಿಲ್ಲಾಧ್ಯಕ್ಷ ಸುನೀಲ್ ಹೆಗಡೆ ಬಣ ಹಾಗೂ ಇನ್ನೊಂದು ಬಣಗಳ ನಡುವೆ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದು, ಎರಡೂ ಬಣಗಳ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.
ಜಿಲ್ಲಾ ಕಾರ್ಯದರ್ಶಿ ಶಿವಾಜಿ ನಿರಸಾನಿಯನ್ನು ಸಭೆಗೆ ಯಾಕೆ ಬಂದಿದ್ದೀಯಾ ಎಂದು ಸುನೀಲ್ ಹೆಗಡೆ ಬಣ ಪ್ರಶ್ನಿಸಿ, ಎಳೆದಾಡಿದ್ದಾರೆ. ಅಲ್ಲದೇ ಶಿವಾಜಿ ನಿರಸಾನಿಯನ್ನು ಥಳಿಸಿದ್ದಾರೆ. ಗಲಾಟೆ ಹೊಡೆದಾಟಕ್ಕೆ ತಿರುಗುತ್ತಿದ್ದಂತೆ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಶಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.