ಮಂಗಳೂರು: ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೋಳಿಯಾರ್ ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕುವಿನಿಂದ ಇರಿಯಲಾಗಿತ್ತು. ಬುಧವಾರ ಬೋಲಿಯಾರ್ ನಿವಾಸಿಗಳಾದ ತಾಜುದ್ದೀನ್, ಸರ್ವಾನ್, ಮುಬಾರಕ್, ಕೋಳಿ ಇರ್ಶಾದ್, ಇಮ್ರಾನ್, ಅಶ್ರಫ್, ತಲ್ಲತ್ ಅವರನ್ನು ಬಂಧಿಸಲಾಗಿದೆ. ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಮತ್ತಷ್ಟು ಆರೋಪಿಗಳು ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮೋದಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಬೋಳಿಯಾರ್ ನಲ್ಲಿ ವಿಜಯೋತ್ಸವ ಮೆರವಣಿಗೆ ಏರ್ಪಡಿಸಲಾಗಿತ್ತು. ಭಾನುವಾರ ರಾತ್ರಿ ಮೆರವಣಿಗೆಯಲ್ಲಿ ಸಾಗಿದವರು ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಹೋಗಿದ್ದಾರೆ ಎನ್ನಲಾಗಿದೆ.
ನಂತರ ಧರ್ಮನಗರದ ಹರೀಶ್, ನಂದಕುಮಾರ್ ಅವರಿಗೆ ಮುಸ್ಲಿಂ ಯುವಕರ ತಂಡ ಬೋಳಿಯಾರ್ ನ ಬಾರ್ ಎದುರು ಚಾಕುವಿನಿಂದ ಇರಿದಿದ್ದಾರೆ. ಪ್ರಚೋದನಾಕಾರಿ ಘೋಷಣೆ ಕೂಗಿದ ಬಗ್ಗೆ ಮಸೀದಿ ಆಡಳಿತ ಮಂಡಳಿಯಿಂದ ದೂರು ನೀಡಲಾಗಿದ್ದು, ಬಿಜೆಪಿ ಕಾರ್ಯಕರ್ತರಾದ ಸುರೇಶ್, ವಿನಯ್, ಸುಭಾಷ್, ರಂಜಿತ್, ಧನಂಜಯ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.