ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಕೆಲವೆಡೆ ಸ್ವಯಂಘೋಷಿತ ಬಂದ್ ಮಾಡಲಾಗಿದೆ. ಬೆಳ್ಳಾರೆ, ಪುತ್ತೂರು, ಸುಳ್ಯ, ಕಡಬದಲ್ಲಿ ಸ್ವಯಂಘೋಷಿತ ಬಂದ್ ಮಾಡಲಾಗಿದೆ. ಹಿಂದೂ ಸಂಘಟನೆಗಳು ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿವೆ.
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳೂರು, ಉಡುಪಿಯಿಂದ ಹೆಚ್ಚುವರಿ ಪೊಲೀಸರ ರವಾನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆಲವೆಡೆ ಶಾಲೆಗಳಿಗೆ ರಜೆ ನೀಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬೊಳ್ವಾರು ಸಮೀಪ ಸರ್ಕಾರಿ ಬಸ್ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ.
ಪ್ರವೀಣ್ ಶವಯಾತ್ರೆಗೆ ಪೊಲೀಸರು ಅನುಮತಿ ನೀಡಿಲ್ಲ. ಮೆರವಣಿಗೆ ವೇಳೆ ಅವಘಡವಾದರೆ ನೀವೇ ಹೊಣೆಗಾರರು ಎಂದು ಮೆರವಣಿಗೆಗೆ ಮನವಿ ಮಾಡಿದ್ದ ಪ್ರವೀಣ್ ಅವರ ಸಂಬಂಧಿಗೆ ಪೊಲೀಸರು ಹೇಳಿದ್ದಾರೆ. ಈ ನಡುವೆಯೇ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪುತ್ತೂರು ಆಸ್ಪತ್ರೆಯಿಂದ ಬೆಳ್ಳಾರೆವರೆಗೆ ಮೃತದೇಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗುವುದು.