
ಬೆಂಗಳೂರು: ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರ್ಕಾರ ಗುತ್ತಿಗೆ ಆಧಾರಿತ ಹುದ್ದೆ ನೀಡಿ ಆದೇಶ ಹೊರಡಿಸಿದೆ.
ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತೆ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಗ್ರೂಪ್ ಸಿ ಗುತ್ತಿಗೆ ಆಧಾರಿತ ಹಿರಿಯ ಸಹಾಯಕರ ಹುದ್ದೆಗೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.