alex Certify ಹಳಬರಿಗೆ ಬಿಗ್ ಶಾಕ್: ಹೊಸಬರಿಗೆ ಚಾನ್ಸ್: 25 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳಬರಿಗೆ ಬಿಗ್ ಶಾಕ್: ಹೊಸಬರಿಗೆ ಚಾನ್ಸ್: 25 ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಬಿಜೆಪಿ ಮಣೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸಿದ್ಧಪಡಿಸಿದೆ.

ಸಂಜೆ ಅಂತಿಮ ಪಟ್ಟಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ಸತತ 12 ತಾಸು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. 180 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದು, ಹಳಬರಿಗೆ ಶಾಕ್ ನೀಡಿ ಹೊಸಬರಿಗೆ ಚಾನ್ಸ್ ಸಿಗುವ ಸಾಧ್ಯತೆ ಇದೆ. 20 ರಿಂದ 25 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಚರ್ಚೆ ನಡೆಸಿದ್ದು, ಸಂಸದೀಯ ಮಂಡಳಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...