ಲಖ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯ ಬಿಜೆಪಿ ಪ್ರಮುಖ ಸ್ವತಂತ್ರ ದೇವ್ ಸಿಂಗಗ ಈ ಬಗ್ಗೆ ಮಾಹಿತಿ ನೀಡಿ, ಉತ್ತರಪ್ರದೇಶದ ಬಿಜೆಪಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆ ಕಾರಣದಿಂದ 75 ಜಿಲ್ಲಾಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 67 ಕಡೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷಾತೀತವಾದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದ್ದಾರೆ. 2016 ರಲ್ಲಿ 60 ಸ್ಥಾನಗಳಲ್ಲಿ ಗೆದ್ದಿದ್ದ ಸಮಾಜವಾದಿ ಪಕ್ಷ 6 ಸ್ಥಾನಗಳಲ್ಲಿ ಜಯಗಳಿಸಿದೆ. ಬಿಜೆಪಿ ಬೆಂಬಲಿತರ ಗೆಲುವು ಮುಂಬರುವ ವಿಧಾನಸಭೆ ಚುನಾವಣೆಗೆ ಹೊಸ ಹುಮ್ಮಸ್ಸು ತಂದಿದೆ.