
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿಯ ಮೂವರು ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.
ವರಿಷ್ಠರ ಕರೆ ಮೇರೆಗೆ ಎಂಎಲ್ ಸಿ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿಮೋಹನ್ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 3:30ಕ್ಕೆ ವರಿಷ್ಠರ ಭೇಟಿಯಾಗಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ವರಿಷ್ಠರು ಮೂವರು ನಾಯಕರಿಗೆ ಬುಲಾವ್ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.