![](https://kannadadunia.com/wp-content/uploads/2022/12/NIRMALA-SITHARAMAN-2021-BUDGET.jpg)
ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ ಕುಮಾರ್ ವೀಕ್ಷಕರಾಗಿ ಆಗಮಿಸಿದ್ದು, ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್ ವೀಕ್ಷಕರನ್ನು ಸ್ವಾಗತಿಸಿದರು.
ಹೈಕಮಾಂಡ್ ವೀಕ್ಷಕರು ಇಂದು ಸಂಜೆ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ವಿಧಾನಸಭೆ ಹಗೂ ವಿಧಾನ ಪರಿಷತ್ ಗೆ ವಿಪಕ್ಷ ನಾಯಕರ ಆಯ್ಕೆ ನಡೆಯಲಿದೆ.
ಮಾಜಿ ಸಚಿವ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.