ಅಗರ್ತಲಾ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು, ಬಿಪ್ಲಬ್ ದೇವ್ ರಾಜೀನಾಮೆ ನೀಡಿದ ನಂತರ ಮಾಣಿಕ್ ಸಹಾ ಅವರು ತ್ರಿಪುರಾ ಸಿಎಂ ಎಂದು ಘೋಷಿಸಲಾಗಿದೆ.
ಬಿಪ್ಲಬ್ ದೇವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ತ್ರಿಪುರಾ ಮುಖ್ಯಸ್ಥ ಮತ್ತು ರಾಜ್ಯಸಭಾ ಸಂಸದ ಮಾಣಿಕ್ ಸಹಾ ಅವರನ್ನು ತ್ರಿಪುರಾದ ನೂತನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.
ಮಾಣಿಕ್ ಸಾಹಾ ಅವರು ತ್ರಿಪುರಾದ ಹೊಸ ಮುಖ್ಯಮಂತ್ರಿ ಎಂದು ಭೂಪೇಂದರ್ ಯಾದವ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಬಿಪ್ಲಬ್ ಕುಮಾರ್ ದೇಬ್ ಅವರು ಬಿಜೆಪಿಯ ತ್ರಿಪುರಾ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ರಾಜ್ಯಪಾಲ ಎಸ್.ಎನ್. ಆರ್ಯ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ಬಿಪ್ಲಬ್ ಕುಮಾರ್ ದೇಬ್ ತಿಳಿಸಿದ್ದಾರೆ.
ಪಕ್ಷ ಎಲ್ಲಕ್ಕಿಂತ ಮಿಗಿಲು. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಅಥವಾ ತ್ರಿಪುರಾ ಮುಖ್ಯಮಂತ್ರಿಯಾಗಲಿ, ನನಗೆ ನೀಡಿದ ಜವಾಬ್ದಾರಿಗಳಿಗೆ ನಾನು ನ್ಯಾಯ ಸಲ್ಲಿಸಿದ್ದೇನೆ. ಎಂದು ಬಿಪ್ಲಬ್ ದೇಬ್ ತಿಳಿಸಿದರು. ನಾಳೆ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.