ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಬಿಜೆಪಿಯ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿಯನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ ನಂದಿಗ್ರಾಮ್ ಬಿಜೆಪಿ ಶಾಸಕ ಸುವೇಂದು ಅಧಿಕಾರಿಯನ್ನು ಇಂದು ಕೋಲ್ಕತ್ತಾದಲ್ಲಿ ನಬಣ್ಣ್ ಚಲೋ ಮೆರವಣಿಗೆಯಲ್ಲಿ ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಬಳಸಿದ್ದಾರೆ.
ನಬಣ್ಣ್ ಅಭಿಯಾನದಲ್ಲಿ ಭಾಗವಹಿಸಲು ಕಾರ್ಯಕರ್ತರು ಕೋಲ್ಕತ್ತಾಗೆ ತೆರಳುತ್ತಿದ್ದಾಗ ರಾಣಿಗಂಜ್ ರೈಲ್ವೆ ನಿಲ್ದಾಣದ ಹೊರಗೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಈ ವೇಳೆ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಬಿಜೆಪಿ ಕಾರ್ಯಕರ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ ಗಳನ್ನು ಉತ್ತರ 24 ಪರಗಣದಲ್ಲಿ ಪೊಲೀಸರು ತಡೆದು ಅನೇಕ ಕಾರ್ಯಕರ್ತರನ್ನು ಕಸ್ಟಡಿಗೆ ತೆಗೆದುಕೊಂಡರು.
ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದರಿಂದ ಬೋಲ್ಪುರ್ ರೈಲ್ವೆ ನಿಲ್ದಾಣದೊಳಗೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಸುವೆಂದು ಅಧಿಕಾರಿ ಸೇರಿ ಹಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.