ನವದೆಹಲಿ: ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಉಸ್ತುವಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಜಿತಿನ್ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹರಿಪ್ರಸಾದ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಜತಿನ್ ಪ್ರಸಾದ್ ಚೇತರಿಸಿಕೊಂಡ ನಂತರ ಅವರೇ ಮುಂದುವರೆಯಲಿದ್ದಾರೆ. ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಎಡಪಕ್ಷಗಳ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.