
ಬೆಂಗಳೂರು: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಸಿದ್ದಾರೆಂದು ಪೊಲೀಸರು ಬಂಧಿಸಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಹರಿಪ್ರಸಾದ್, ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧಿಸಿದಾಗ ನಡೆಸಿಕೊಂಡ ರೀತಿ ತಪ್ಪು. ಈ ವಿಚಾರದಲ್ಲಿ ರವಿ ಅವರದ್ದು ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಅವರದ್ದು ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ, ಸದನದ ಗೌರವಾನ್ವಿತ ಸದಸ್ಯರನ್ನು ನಡೆಸಿಕೊಂಡ ಕ್ರಮ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.